ಕೃಷ್ಣರಾಜಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಮಕ್ಕಳ
ಬೈಸಿಕಲ್ ವಿತರಣಾ ಕಾರ್ಯಕ್ರಮ...ಮಕ್ಕಳ ಸುಪ್ತ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ.. ಮಕ್ಕಳು ತಮ್ಮಲ್ಲಿ ಸುಪ್ತವಾಗಿರುವ ಕಲಾ ಚಟುವಟಿಕೆಗಳನ್ನು ಶ್ರದ್ಧಾ ಭಕ್ತಿಯಿಂದ ಕಲಿತು ಪ್ರದರ್ಶನ ಮಾಡಿ ಸಾಧನೆ ಮಾಡಬೇಕು ಎಂದು ಕರೆ ನೀಡಿದ ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಗಾಯತ್ರಿರೇವಣ್ಣ...ಕಾರ್ಯಕ್ರಮದಲ್ಲಿ ಬಿಇಓ ರೇವಣ್ಣ, ತಾ.ಪಂ ಸ್ಥಾಯಿಸಮಿತಿ ಅಧ್ಯಕ್ಷ ರಾಜು, ಜಿ.ಪಂ ಸದಸ್ಯರಾದ ಬಿ.ಎಲ್.ದೇವರಾಜು, ಮುಖ್ಯಶಿಕ್ಷಕ ಅನಂತು, ಗೋವಿಂದರಾಜು, ಪಿ.ಜೆ.ಕುಮಾರ್, ಎಸ್.ಕೆ.ರವಿಕುಮಾರ್, ಕ್ಷೇತ್ರಸಮನ್ವಯಾಧಿಕಾರಿ ಲಿಂಗರಾಜು ಸೇರಿದಂತೆ ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು...