ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೆಚ್.ಎನ್.ಲವಣ್ಣ ಅವಿರೋಧವಾಗಿ ಆಯ್ಕೆ..

Post by: 0

ಶ್ರವಣಬೆಳಗೊಳ: ಹೋಬಳಿಯ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಹಡೇನಹಳ್ಳಿ ಹೆಚ್.ಎನ್.ಲವಣ್ಣ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.ಈ ಹಿಂದಿನ ಅಧ್ಯಕ್ಷ ಕೇಶವಮೂರ್ತಿ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಹಡೇನಹಳ್ಳಿ ಹೆಚ್.ಎನ್.ಲವಣ್ಣ ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಮತ್ಯಾವ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಚುನಾವಣಾಧಿಕಾರಿ ಸುನಿಲ್ ಕುಮಾರ್ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು.

ನೂತನ ಅಧ್ಯಕ್ಷ ಹಡೇನಹಳ್ಳಿ ಹೆಚ್.ಎನ್.ಲವಣ್ಣ ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇವೆ. ಎಲ್ಲಾ ಸದಸ್ಯರ ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬಹುದು ಎಂದು ಹೇಳಿದರು.ಮಾಜಿ ಅಧ್ಯಕ್ಷ ಕೇಶವಮೂರ್ತಿ, ಉಪಾಧ್ಯಕ್ಷೆ ಪ್ರೀತಿ ಕುಮಾರಿ ಸೇರಿದಂತೆ 14 ಸದಸ್ಯರು ಹಾಜರಿದ್ದರು.

ರಾಜ್ಯ ಮಾರಾಟ ಮಹಾ ಮಂಡಳದ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮಿಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ಯೋಗೆಶ್, ಕೆಂಪೇಗೌಡ ವೇದಿಕೆ ಅಧ್ಯಕ್ಷ ಆನಂದ್ ಕಾಳೇನಹಳ್ಳಿ, ಪರಮಕೃಷ್ಣೇಗೌಡ, ಎ.ಆರ್.ಶಿವರಾಜ್, ಕಬ್ಬಾಳು ರಮೇಶ್, ಇಂಗ್ಲಿಷ್ ಮಂಜಣ್ಣ, ಎಸ್.ಬಿ.ಜಗದೀಶ್ ಹಾಗೂ ಮುಖಂಡರು, ಸ್ನೇಹಿತರು ಈ ಸಂದರ್ಭದಲ್ಲಿ ಹಾಜರಿದ್ದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

Last modified on Saturday, 11 February 2023 13:16

Leave a comment

Make sure you enter all the required information, indicated by an asterisk (*). HTML code is not allowed.

No Internet Connection