ಜುಲೈ 4ರೊಳಗೆ 5 ಗ್ಯಾರಂಟಿ ಕೊಡಿ ..!! ಅಥವಾ ಅಧಿಕಾರ ಬಿಡಿ : ಮಾಜಿ ಸಿಎಂ ಬಿಎಸ್​ವೈ..!!

Post by: 0

ಜುಲೈ 4ರೊಳಗೆ 5 ಗ್ಯಾರಂಟಿ ಕೊಡಿ ..!! ಅಥವಾ ಅಧಿಕಾರ ಬಿಡಿ : ಮಾಜಿ ಸಿಎಂ ಬಿಎಸ್​ವೈ..!!

ದಾವಣೆಗೆರೆ: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಜುಲೈ 4ರೊಳಗೆ ಈಡೇರಿಸಬೇಕು ಇಲ್ಲವಾದಲ್ಲಿ ಜುಲೈ 5ರಿಂದ ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದ್ಧಾರೆ.

ದಾವಣಗೆರೆಯಲ್ಲಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬಿಎಸ್​ವೈ ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸಹಿ ಮಾಡಿದ ಕಾರ್ಡ್​ಗಳನ್ನು​ ಮನೆ ಮನೆಗೆ ವಿತರಿಸಿದ್ದರು. ಇದನ್ನು ನಂಬಿ ಜನ ನಿಮಗೆ ಮತ ಹಾಕಿದ್ದಾರೆ. ನಿರೀಕ್ಷೆ ಮಾಡದಷ್ಟು ಮಟ್ಟಿಗೆ ಕಾಂಗ್ರೆಸ್​ ಗೆಲುವು ಸಾಧಿಸಿದೆ.

ಉಪವಾಸ ಹೋರಾಟ
ಹಲವು ಷರತ್ತುಗಳನ್ನು ವಿಧಿಸಿ ಶಕ್ತಿ ಯೋಜನೆ ಜಾರಿಗೆ ತಂದು ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದೀರಾ. ಅದು ಬಿಟ್ಟರೆ ಒಂದೂವರೆ ತಿಂಗಳಿನಿಂದ ಉಳಿದ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ. ಜುಲೈ 3ರಂದು ಬಜೆಟ್​ ಪೂರ್ವಭಾವಿ ಅಧಿವೇಶನ ನಡೆಯಲಿದ್ದು, ಅಷ್ಟರಲ್ಲಿ ಉಳಿದ ಗ್ಯಾರಂಟಿಗಳನ್ನು ಜಾರಿಗೆ ತರಬೇಕು. ಇಲ್ಲವಾದಲ್ಲಿ ಜುಲೈ 5ರಿಂದ ಗಾಂಧಿ ಪ್ರತಿಮೆ ಎದುರು ಉಪವಾಸ ಹೋರಾಟ ಮಾಡುತ್ತೇನೆ.

ಚುನಾವಣೆಯಲ್ಲಿ ಹಿನ್ನಡೆ ಕಂಡ ಅಭ್ಯರ್ಥಿಗಳು ನನ್ನ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ಧಾರೆ. ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ನಮ್ಮ ಪಕ್ಷದ ಶಾಸಕರು ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್​ನವರ ಕಿವಿ ಹಿಂಡಲಿದ್ಧಾರೆ. ಭರವಸೆ ಈಡೇರಿಸುವವರೆಗೂ ಧರಣಿಯನ್ನು ಕೈ ಬಿಡುವ ಮಾತಿಲ್ಲ ಎಂದು ಹೇಳಿದ್ಧಾರೆ.

ಜನರನ್ನು ಮರಳು ಮಾಡಲು ಕಾಂಗ್ರೆಸ್​ ಸರ್ಕಾರ ದಿನಕ್ಕೊಂದು ನಾಟಕವಾಡುತ್ತಿದೆ. ಚುನಾವಣೆಯಲ್ಲಿ ಗೆಲ್ಲಲೆಂದು ಭರವಸೆ ನೀಡಿದ್ಧಾರೆಯೇ ಹೊರತು ಈ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಒಂದು ಮಾತು ಕೇಳಿಲ್ಲ. ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ ಕೊಡುತ್ತಿದ್ದು, ಕಾಂಗ್ರೆಸ್ನವರು ಹೇಳಿದಂತೆ 10 ಕೆಜಿ ಸೇರಿಸಿ ಜನತೆಗೆ ಒಟ್ಟು 15 ಕೆಜಿ ಅಕ್ಕಿ ಕೊಡಲಿ. ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ಧಾರೆ.

Leave a comment

Make sure you enter all the required information, indicated by an asterisk (*). HTML code is not allowed.

No Internet Connection