ಬೆಂಗಳೂರಿಗೆ ಮತ್ತು ನನ್ನ ಸಂಬಂಧದ ಬಗ್ಗೆ ಅಶ್ವತ್ಥ ನಾರಾಯಣ್​​ಗೆ ಗೊತ್ತಿಲ್ಲ..!! ಡಿಕೆಶಿ ತಿರುಗೇಟು..!!

Post by: 0

ಬೆಂಗಳೂರಿಗೆ ಮತ್ತು ನನ್ನ ಸಂಬಂಧದ ಬಗ್ಗೆ ಅಶ್ವತ್ಥ ನಾರಾಯಣ್​​ಗೆ ಗೊತ್ತಿಲ್ಲ..!! ಡಿಕೆಶಿ ತಿರುಗೇಟು..!!

ಬೆಂಗಳೂರು: ‘ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಅಶ್ವತ್ಥ ನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಉತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ್​ಗೆ ತಿರುಗೇಟು ನೀಡಿದರು.

‘ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂಭಿಸಿದೆ. ತಮಿಳುನಾಡಿನ ಗಡಿ ಭಾಗ ಸಂಗಮದ ಬಳಿ ಕೆಂಪೇಗೌಡರ ಕೋಟೆ ಇದೆ. ಅದರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಆ ಕೋಟೆ ಸಮೀಪ ಅಕ್ಕಪಕ್ಕದಲ್ಲಿ ನಿಜಲಿಂಗಪ್ಪ ಹಾಗೂ ವೀರೇಂದ್ರ ಪಾಟೀಲ್ ಮನೆ ಇದೆ. ಅಲ್ಲೇ ಹತ್ತಿರದಲ್ಲಿ ನನ್ನ ತಂದೆ ದೊಡ್ಡಹಾಲಹಳ್ಳಿ ಕೆಂಪೇಗೌಡರ ನಿವಾಸ ಇದೆ. ಇತ್ತೀಚೆಗೆ ಅದನ್ನು ಮಾರಿದ್ದೇನೆ. ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಇರುವ ಸಂಬಂಧ’ ಎಂದು ತಿಳಿಸಿದರು.

Leave a comment

Make sure you enter all the required information, indicated by an asterisk (*). HTML code is not allowed.

No Internet Connection